ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧಿಕೃತ ಜಾಲತಾಣ
Englishಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಸುಸ್ವಾಗತ. ರಿಯಲ್ ಎಸ್ಟೇಟ್ ಉದ್ಯಮದ ಎಲ್ಲಾ ಹೂಡಿಕೆದಾರರ ಅನುಕೂಲಕ್ಕಾಗಿ ಈ ಜಾಲತಾಣವನ್ನು ಅಭಿವೃದ್ಧಿಪಡಿಸಲಾಗಿದೆ, ವಿಶೇಷವಾಗಿ ಸಾಮಾನ್ಯ ಜನರು ಮತ್ತು ಗ್ರಾಹಕರಿಗಾಗಿ. ಈ ಜಾಲತಾಣವನ್ನು ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, 2016 ರ ಕಲಂ 4(3) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಕರ್ನಾಟಕ ಸರ್ಕಾರದ ವಸತಿ ಇಲಾಖೆ, ಕರ್ನಾಟಕ ರಾಜ್ಯದಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ನೋಡೆಲ್ ಇಲಾಖೆಯಾಗಿದೆ. ಈ ಕಾಯ್ಧೆಯು 1ನೇ ಮೇ 2017 ರಿಂದ ಜಾರಿಗೆ ಬಂದಿದ್ದು, ನಿಯಮಗಳನ್ನು ಕರ್ನಾಟಕ ಸರ್ಕಾರವು 10ನೇ ಜುಲೈ 2017 ರಂದು ಅಧಿಕೃತವಾಗಿ ಪ್ರಕಟಿಸಿದೆ.
ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, 2016 ಅನ್ನು ಭಾರತ ಸರ್ಕಾರ ಅಂಗೀಕರಿಸಿದ ಹೆಗ್ಗುರುತು ಶಾಸನಗಳಲ್ಲಿ ಒಂದಾಗಿದೆ. ಭಾರತದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರವನ್ನು ಸುಧಾರಿಸುವುದು ಪಾರದರ್ಶಕತೆ, ನಾಗರೀಕ ಕೇಂದ್ರಿತತೆ, ಹೊಣೆಗಾರಿಕೆ ಮತ್ತು ಆರ್ಥಿಕ ಶಿಸ್ತನ್ನು ಉತ್ತೇಜಿಸುವುದು ಇದರ ಉದ್ದೇಶ. ಇದು ಭಾರತದ ವಿಶಾಲ ಮತ್ತು ಬೆಳೆಯುತ್ತಿರುವ ಆರ್ಥಿಕತೆಗೆ ಅನುಕೂಲಕರವಾಗಿರುತ್ತದೆ, ಏಕೆಂದರೆ ಭವಿಷ್ಯದಲ್ಲಿ ಅನೇಕ ಜನರು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಾರೆ.